Attended the progress review meeting of Karnataka State Solid Government ambitious, social and educational survey held under the presence of Hon'ble Chief Minister Shri Siddaramaiah and Hon'ble Deputy Chief Minister Shri D K Shivakumar, 07/10/2025
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರ ಉಪಸ್ಥಿತಿಯಲ್ಲಿ ನಡೆದ ಕರ್ನಾಟಕ ರಾಜ್ಯ ಘನ ಸರಕಾರದ ಮಹತ್ವಾಕಾಂಕ್ಷೆಯ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲಾಯಿತು.

Valmiki Jayanthi was celebrated today at Bangalore Vidhana Soudha Hall chaired by Karnataka State Chief Minister Shri Siddaramaiah. J of Virajpet constituency of Kodagu came to the forefront of the society from the tribes and fought for rehabilitation to , 07/10/2025
ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧ ಸಭಾಂಗಣದಲ್ಲಿ ಇಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬುಡಕಟ್ಟು ಜನಾಂಗದಿಂದ ಸಮಾಜದ ಮುನ್ನೆಲೆಗೆ ಬಂದು, ನಿರಾಶ್ರಿತರಿಗೆ ದಿಡ್ಡಳ್ಳಿಯಲ್ಲಿ ಪುನರ್ವಸತಿ ಕಲ್ಪಿಸಲು ಹೋರಾಟ ಮಾಡಿ ಯಶಸ್ಸು ಗಳಿಸಿದ, ಕೊಡಗಿನ ವಿರಾಜಪೇಟೆ ಕ್ಷೇತ್ರದ ಜೆ.ಕೆ ಮುತ್ತಮ್ಮರವರಿಗೆ ಪ್ರತಿಷ್ಠಿತ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Best wishes on the occasion of 'Adikavi' Maharshi Valmiki Jayanti who created the first epic poet of India 'Ramayana', 06/10/2025
ಭಾರತದ ಮೊಟ್ಟಮೊದಲ ಮಹಾಕಾವ್ಯ 'ರಾಮಾಯಣ'ವನ್ನು ರಚಿಸಿದ 'ಆದಿಕವಿ' ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.

Participated in the first meeting of the 2025 Karnataka Land Revenue Second Amendment Obedience Committee regarding Kodagu district chaired by Revenue Minister Shri Krishna Bhairegowda and presented the guidelines regarding Jamma Bane land in Kodagu distr, 06/10/2025
ಕಂದಾಯ ಸಚಿವರಾದ ಶ್ರೀ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕೊಡಗು ಜಿಲ್ಲೆಗೆ ಸಂಬಂಧಿಸಿದ 2025ನೇ ಸಾಲಿನ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಮೊದಲ ಸಭೆಯಲ್ಲಿ ಭಾಗವಹಿಸಿ ಕೊಡಗು ಜಿಲ್ಲೆಯ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದಂತೆ ವಿವರಣೆ ನೀಡಿ ಮಾರ್ಗೋಪಾಯ ಅಭಿಪ್ರಾಯಗಳನ್ನು ಮಂಡಿಸಲಾಯಿತು.

Participated in the birthday celebration of Chandanavana star couple Bhuvan and Harshika Poonacha along with my Mrs. Kanchan Ponnanna and wishing the child a bright future, 06/10/2025
ಚಂದನವನದ ತಾರಾ ದಂಪತಿಗಳಾದ ಭುವನ್ ಹಾಗೂ ಹರ್ಷಿಕ ಪೂಣಚ್ಚ ರವರ ಮಗುವಿನ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ನನ್ನ ಶ್ರೀಮತಿ ಕಾಂಚನ್ ಪೊನ್ನಣ್ಣ ರವರ ಜೊತೆಯಲ್ಲಿ ಭಾಗವಹಿಸಿ ಮಗುವಿನ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದೆ.
